ಮನೋರಂಜನೆ

4 months ago news image
ಯೂ ಟ್ಯೂಬ್ ನಲ್ಲಿ ನಂ 1 ಟ್ರೆಂಡಿಂಗ್ ಪಡೆದ 'ಹಂಬಲ್ ಪೊಲಿಟಿಷಿಯನ್ ನಾಗರಾಜ್'..!
ಸುದ್ದಿಗಳು/ ಮನೋರಂಜನೆ 0

ಈಗಾಗಲೇ ಸಾಕಷ್ಟು ಕುತೂಹಲ ಕೆರಳಿಸಿರುವ ಸಿನಿಮಾ 'ಹಂಬಲ್ ಪೊಲಿಟಿಷಿಯನ್ ನಾಗರಾಜ್'. ಈಗಾಗಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ.

'ಹಂಬಲ್ ಪೊಲಿಟಿಷಿಯನ್ ನಾಗರಾಜ್' ಸಿನಿಮಾ ಮೂಲಕ ನಿರೂಪಕ ಡ್ಯಾನಿಶ್‌ ಸೇಠ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ನಟಿ ಶೃತಿ ಹರಿಹರನ್ ಕೂಡ ನಟಿಸುತ್ತಿದ್ದಾರೆ. ಇದು ಕಾಮಿಡಿ ಆಧಾರಿತ ಸಿನಿಮಾ ಆಗಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್ ನಲ್ಲಿ ಸಖತ್ ಕಾಮಿಡಿ ಕಚಗುಳಿ ಇಟ್ಟಿದೆ. ಅಂದಹಾಗೆ ಈ ಸಿನಿಮಾವನ್ನು ಸಾದ್ ಖಾನ್ ನಿರ್ದೇಶನ ಮಾಡುತ್ತಿದ್ದಾರೆ. 

ಈಗ ಈ ಸಿನಿಮಾದ ಟ್ರೇಲರ್ ಯೂ ಟ್ಯೂಬ್ ನಲ್ಲಿ ನಂಬರ್ 1 ಟ್ರೆಂಡಿಂಗ್ ಸ್ಥಾನವನ್ನು ಪಡೆದುಕೊಂಡಿದೆ. ನಿನ್ನೆಯಷ್ಟೇ ಟ್ರೇಲರ್ ರಿಲೀಸ್ ಆಗಿದ್ದು, ಈಗಾಗಲೇ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ಧಾರೆ. ಸದ್ಯದಲ್ಲಿಯೇ 'ಹಂಬಲ್ ಪೊಲಿಟಿಷಿಯನ್ ನಾಗರಾಜ್' ತೆರೆಗೆ ಬರುವ ನಿರೀಕ್ಷೆಯಿದೆ.

ನಿಮ್ಮ ಅಭಿಪ್ರಾಯಗಳು


ಕಾರ್ಯಕ್ರಮದ ಸಮಯ

ಬಾಲ್ಕನಿ ನ್ಯೂಸ್ ಪೋಲ್ಗಳು
ಹೊಸ ಬಿಡುಗಡೆ

ಫೇಸ್ಬುಕ್

ಟ್ವಿಟರ್