ಮನೋರಂಜನೆ

2 months ago news image
ಸ್ಟೈಲಿಸ್ ಸ್ಟಾರ್ ಅಲ್ಲು ಅರ್ಜುನ ರಾಜಕೀಯಕ್ಕೆ ಎಂಟ್ರಿ ..?
ಸುದ್ದಿಗಳು/ ಮನೋರಂಜನೆ 0

ಇತ್ತೀಚೆಗೆ ಸಿನಿಮಾದ ನಟ ನಟಿಯರು ರಾಜಕೀಯ ರಂಗಕ್ಕೆ ಎಂಟ್ರಿ ಕೊಡುವುದು ಮಾಮೂಲಾಗಿ ಬಿಟ್ಟಿದೆ. ಅದರಲ್ಲೂ ಮುಂದಿನ ಚುನಾವಣಾ ಹಣಾಹಣಿಗೆ ಸ್ಟಾರ್ ನಟರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಉಪೇಂದ್ರ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೆ ಕಮಲ್ ಹಾಸನ್ ಕೂಡ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ. ಈಗ ಮತ್ತೊಬ್ಬ ಸ್ಟಾರ್ ನಟರು ರಾಜಕೀಯಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಅಂದಹಾಗೆ ಆ ನಟ ಯಾರು ಗೊತ್ತಾ ..?

ಹೌದು, ತೆಲುಗಿನ ಸ್ಟೈಲಿಸ್ ಸ್ಟಾರ್ ಅಲ್ಲು ಅರ್ಜುನ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ. ಇತ್ತೀಚೆಗೆ ಈ ವಿಷಯ ಪ್ರಸ್ತಾಪ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶ ಅಥವಾ ತೆಲಂಗಾಣ ರಾಜ್ಯದಿಂದ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಲ್ಲು ಅರ್ಜುನ ಅವರು ಸದ್ಯ ನಾ ಪೇರು ಸೂರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಡಿಜೆ ಸಿನಿಮಾದಲ್ಲಿ ನಟಿಸಿದ್ದರು. ಒಟ್ಟಿನಲ್ಲಿ ಸ್ಟೈಲಿಸ್ ನಟ ಅಲ್ಲು ಅರ್ಜುನ ಅವರು ರಾಜಕೀಯ ರಂಗಕ್ಕೆ ಎಂಟ್ರಿ ಕೊಡುತ್ತಾರೆ ಅಥವಾ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ.


ನಿಮ್ಮ ಅಭಿಪ್ರಾಯಗಳು


ಕಾರ್ಯಕ್ರಮದ ಸಮಯ

ಬಾಲ್ಕನಿ ನ್ಯೂಸ್ ಪೋಲ್ಗಳು
ಹೊಸ ಬಿಡುಗಡೆ

ಫೇಸ್ಬುಕ್

ಟ್ವಿಟರ್